ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ
ಕಂಬದಕೋಣೆ ಜಂಕ್ಷನ್ ಸಮೀಪ ಶನಿವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ.ಕಾರು ಕಾರವಾರದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ನಿದ್ರೆಯ ಮಂಪರು ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಸ್ಥಳೀಯರ ಸಹಾಯದಿಂದ ಕಾರಿನೊಳಕ್ಕೆ ಸಿಲುಕಿದ ವ್ಯಕ್ತಿಯನ್ನು ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು.ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷೀಸಿದ ವೈದ್ಯರು ಮ್ರತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ಕಾರು ಚಾಲಕನನ್ನು ಪ್ರದ್ಯೋತ್ ಎಂದು ಗುರುತ್ತಿಸಲಾಗಿದೆ. ಸ್ಥಳಕ್ಕೆ ಬೈಂದೂರು ಪಿ.ಎಸ್.ಐ ತಿಮ್ಮೇಶ್ ಬಿ.ಎನ್.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲಿಸಿ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.