ಉಡುಪಿ :ಜನವರಿ 03 :ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ, ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ, ಅಗ್ನಶಾಮಕ ದಳ ಅಧಿಕಾರಿಗಳು ಹಾಗೂ ಮಲ್ಪೆ ಮೀನುಗಾರ ಸಂಘದ ಪದಾಧಿಕಾರಿಗಳು ಹಾಗೂ ಮೀನುಗಾರ ಮುಖಂಡರೊಂದಿಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸಭೆ ನಡೆಸಿ ಮಲ್ಪೆ ಮೀನುಗಾರಿಕೆ ಬಂದರಿಗೆ ಸಂಬಂಧಿಸಿದ ವಿವಿಧ ಸಮಸ್ಯೆ, ಬೇಡಿಕೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ಸಭೆಯಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಸುವರ್ಣ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಾದ ಶ್ರೀ ಹರೀಶ್ ಕುಮಾರ್, ಶ್ರೀ ವಿವೇಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.