ಬೆಂಗಳೂರು: ಜನವರಿ 09 : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಆರಂಭಿಸಿದ್ದಾರೆ
ಲೋಕಾಯುಕ್ತ ಅಧಿಕಾರಿಗಳು ಒಟ್ಟು ಏಳು ಕಡೆ ದಾಳಿ ಮಾಡಿದ್ದಾರೆ. ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಶೋಧ ನಡೆಸಿದ್ದಾರೆ. ಕುಂದಣ ಪಿಡಿಒ ಪದ್ಮನಾಬ್ ಅವರಿಗೆ ಸೇರಿದ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದರೆ. ಜೊತೆಗೆ ದಾಬಸ್ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.