ನವದೆಹಲಿ : ಜನವರಿ 12: ದ್ರಶ್ಯ ನ್ಯೂಸ್ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಸೇತುವೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನ ಇಡಲಾಗಿದೆ. 21.8 ಕಿ.ಮೀ ಉದ್ದದ ಆರು ಪಥದ ಸೇತುವೆಯನ್ನು 18,000 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಪ್ರ
ಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸೇತುವೆಯು ಮುಂಬೈ ಮತ್ತು ಪುಣೆ ಎಕ್ಸ್‌ಪ್ರೆಸ್‌ವೇ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ. ನಿರ್ಮಾಣ ಹಂತದಲ್ಲಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತಹ ಪ್ರದೇಶಗಳಿಗೆ ಸಂಪರ್ಕವನ್ನು ಒದಗಿಸುತ್ತದೆ. ಪ್ರತಿದಿನ 70,000 ವಾಹನಗಳು ಸೇತುವೆಯನ್ನು ಬಳಸುವ ನಿರೀಕ್ಷೆಯಿದೆ