ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ಹಸುಗಳಿಗೆ ಆಹಾರ ನೀಡಿದರು.
ಮಕರ ಸಂಕ್ರಾಂತಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಗೋವುಗಳಿಗೆ ಆಹಾರ ನೀಡಿದ್ದಾರೆ. ಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು ಎಲ್ಲಾ ನಾಗರಿಕರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ನೆಮ್ಮದಿಯ ನಿರಂತರ ಹರಿವನ್ನು ಹಾರೈಸಿದರು.
ಇದಕ್ಕೂ ಮುನ್ನ ರಾಷ್ಟ್ರ ರಾಜಧಾನಿಯ ರಾಜ್ಯ ಸಚಿವ ಎಲ್ ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಭಾಗವಹಿಸಿದ್ದರು