ಉಡುಪಿ : ರಾಜ್ಯದಲ್ಲಿ ಲೊಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ಪಕ್ಷದ ಸಂಘಟನಾತ್ನಕ ಶಕ್ತಿಯನ್ನಯ ಹೆಚ್ಚಿಸಲು 39 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರನ್ನಾಗಿ ಕಿಶೋರ್ ಕುಂದಾಪುರ ಇವರನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಕಿಶೋರ್ ಕುಮಾರ್ ಅವರು 2013 ರಲ್ಲಿ ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪಕ್ಷೇತರರಾಗಿ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕುಂದಾಪುರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.