ಉಡುಪಿ : ಜನವರಿ 16: ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಇದರ ಮಲ್ಪೆ ಶಾಖೆಗೆ ಭೇಟಿ ನೀಡಿದ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರೂ, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಗೌರವಿಸಿ ಆಶೀರ್ವಚನ ಪಡೆದರು.
ಸಮಾರಂಭದಲ್ಲಿ ಗಣ್ಯರಾದ ಶ್ರೀ ಆನಂದ ಸಿ. ಕುಂದರ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಸುವರ್ಣ ಹಾಗೂ ಮೀನುಗಾರ ಮುಖಂಡರು, ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.