ಉಡುಪಿ : ಜನವರಿ 18 : ದೃಶ್ಯ ನ್ಯೂಸ್ ; ಅಷ್ಟಮಠಗಳ ನಾಡು ಉಡುಪಿಯಲ್ಲಿ 2 ವರ್ಷಗಳಿಗೆ ಒಮ್ಮೆ ನಡೆಯುವ ಪರ್ಯಾಯ ಕಾರ್ಯಕ್ರಮ ಇಂದು ಆರಂಭವಾಗಿದೆ. ಮೆರವಣಿಯಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶಿಷ್ಯರಾದ ಸುಶೀಂದ್ರ ತೀರ್ಥರು ಭಾಗಿಯಾಗಿದ್ದು, ಹತ್ತಾರು ಟ್ಯಾಬ್ಲೋಗಳು ಸೇರಿದಂತೆ ಭಜನಾ ತಂಡ ಹುಲಿವೇಷ ತಂಡಗಳು ಪರ್ಯಾಯ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದವು. ಉಡುಪಿಯ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಆರಂಭವಾಗಿ ರಥ ಬೀದಿಯವರೆಗೂ ಸಾಗಿತು.
ಉಡುಪಿಯಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ಗುರುವಾರ ಬೆಳಗಿನ ಜಾವ 2.30ರಿಂದ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಪರ್ಯಾಯ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭಾಗವಹಿಸಿದರು. ಈ ವೇಳೆ ಪರ್ಯಾಯ ಶ್ರೀ ಕೃಷ್ಣ ಪೂಜಾ ಕೈಂಕರ್ಯ ನೇರವೇರಿಸಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಯಶ್ಪಾಲ್ ಸುವರ್ಣ, ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕೃಷ್ಣನ ಭಕ್ತರು ಉಪಸ್ಥಿತರಿದ್ದರು.
ಪರ್ಯಾಯ ಮೆರವಣಿಗೆಯಲ್ಲಿ ಭಕ್ತ ಸಾಗರವೇ ಹರಿದು ಬಂದಿತು. ಬೆಳ್ಳಂಬೆಳಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಮೆರವಣಿಯಲ್ಲಿ ಸಾಗಿದರು
ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವದ ಭವ್ಯ ಶೋಭಾ ಯಾತ್ರೆ ಗುರುವಾರ ಬೆಳಗಿನ ಜಾವ ಅದ್ದೂರಿಯಾಗಿ ಜರುಗುವುದರೊಂದಿಗೆ ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು.