ಉಡುಪಿ : ಜನವರಿ 18 : ದ್ರಶ್ಯ ನ್ಯೂಸ್ : ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿಂದ ಗುರುವಾರ ರಾಜಾಂಗಣದಲ್ಲಿ ಸಾರ್ವಜನಿಕ ದರ್ಬಾರ್ ನೆರವೇರಿತು. ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಅನೇಕ ಗಣ್ಯರು ಸಾರ್ವಜನಿಕ ದರ್ಬಾರ್ಗೆ ಹಾಜರಾದರು.
ಸಂಪ್ರದಾಯದಂತೆ ಮೊದಲು ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣ ಮಠದಲ್ಲಿ ಖಾಸಗಿ ದರ್ಬಾರ್ ನಡೆಸಿದರು. ನಂತರ ಸಾರ್ವಜನಿಕ ದರ್ಬಾರ್ನಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾಗಿಯಾದರು.