ಬೆಂಗಳೂರು : ಜನವರಿ 18:ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ ಶೇ. 10% ಬದಲಾಗಿ, 10 ಯೂನಿಟ್ ಉಚಿತ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ.
ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ (gruha jyothi scheme) ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. ಶೇಕಡವಾರು 10ರಷ್ಟು ಬದಲು 10 ಯುನಿಟ್ ಫ್ರೀ ವಿದ್ಯುತ್ ನೀಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಸದ್ಯ ಗೃಹಜ್ಯೋತಿ ಫಲಾನುಭವಿಗಳು 200 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಮಿತಿ ದಾಟಿದ ಬಳಕೆದಾರರು ಕಡ್ಡಾಯವಾಗಿ ಬಿಲ್ ಪಾವತಿ ಮಾಡುವಂತೆ ಸರ್ಕಾರ ಆದೇಶ ನೀಡಿತ್ತು.
ವಾರ್ಷಿಕ ವಿದ್ಯುತ್ ಬಳಕೆ ಆಧರಿಸಿ ಶೇ. 10 ರಷ್ಟು ಹೆಚ್ಚುವರಿ ವಿದ್ಯುತ್ ನೀಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಇದೀಗ 10% ಬದಲಾಗಿ 10 ಯೂನಿಟ್ ಹೆಚ್ಚುವರಿ ವಿದ್ಯುತ್ ನೀಡಲು ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಈ ಬಗ್ಗೆ ಇಂದು(ಜನವರಿ 18) ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.