ಉಡುಪಿ, ಜನವರಿ 22: ಅಯೋಧ್ಯೆಯ ಶ್ರೀರಾಮ ಮಂದಿರದ ನೂತನ ಕಟ್ಟಡ ದಲ್ಲಿ ಇಂದುಜನವರಿ 22ರಂದು ನಡೆಯಲಿರುವ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಾಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ನೇತೃತ್ವದಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮೂವರು ಡಿವೈಎಸ್ಪಿಗಳು, 10 ಪೊಲೀಸ್ ನಿರೀಕ್ಷಕರು, 47 ಪೊಲೀಸ್ ಉಪನಿರೀಕ್ಷಕರು, 670 ಪೊಲೀಸ್ ಸಿಬಂದಿ, 100 ಗೃಹ ರಕ್ಷಕ ದಳದ ಸಿಬ್ಬಂದಿ, ಮೂರು ಕೆಎಸ್‌ಆರ್‌ಪಿ, ಎಂಟು ಜಿಲ್ಲಾ ಸಶಸ್ತ ಮೀಸಲು ಪಡೆ ತುಕಡಿಯನ್ನು ನಿಯೋಜಿಸಲಾಗಿದೆ.
ಈ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಮೆರವಣಿಗೆ ಹಾಗೂ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಅನುಮತಿ ನೀಡಿಲ್ಲ. ದೇವಸ್ಥಾನಗಳಲ್ಲಿ ಪೂಜೆ ಹಾಗೂ ಎಲ್‌ಇಡಿ ಮೂಲಕ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾ ಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.