ಉಡುಪಿ : ಜನವರಿ 23: ದ್ರಶ್ಯ ನ್ಯೂಸ್ :ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಗ್ರಾಮಾಂತರ ಕೈಗಾರಿಕೆ ವತಿಯಿಂದ ಆಯೋಜಿಸಿದ್ದ 2023-24ನೇ ಸಾಲಿನ ವೃತ್ತಿಪರ ಯೋಜನೆಯಡಿಯಲ್ಲಿ ಮಂಜೂರಾದ ಉಚಿತ ಉಪಕರಣ ವಿತರಣಾ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಫಲಾನುಭವಿಗಳಿಗೆ ಉಪಕರಣಗಳನ್ನು ಹಸ್ತಾಂತರಿಸಿದರು
ಸಮಾರಂಭದಲ್ಲಿ ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ಉಪ ಕಾರ್ಯದರ್ಶಿ ಶ್ರೀ ರಾಜು ಮೊಗವೀರ, ಇಲಾಖೆಯ ಉಪನಿರ್ದೇಶಕರಾದ ಶ್ರೀ ವಾಮನ ಹಾಗೂ ಇಲಾಖೆಯ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.