ಉಡುಪಿ : ಜನವರಿ 24: ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಹಸ್ತಶಿಲ್ಪಕ್ಕೆ (ಹೆರಿಟೇಜ್ ವಿಲೇಜ್) ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ ನೀಡಿದರು.
ಹಸ್ತ ಶಿಲ್ಪದಲ್ಲಿನ ಭಾರತೀಯ ಪರಂಪರೆ, ಸಾಂಪ್ರದಾಯಿಕ ಮನೆಗಳು, ಕರಕುಶಲ ವಸ್ತುಗಳು, ಕಲಾಕೃತಿಗಳನ್ನು ವೀಕ್ಷಿಸಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.