ಉಡುಪಿ, ಜನವರಿ 24: ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಜನವರಿ 26 ರಿಂದ 28 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಳರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.