ಉಡುಪಿ :ಜನವರಿ 26:ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಆಡಳಿತದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಕೃಷಿಕರಿಗೆ ಕೊಡ ಮಾಡುವ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ನಡೆಯಿತು
ಶ್ರೀ.ಕೆ. ಆನಂತಕೃಷ್ಣ ಬಿನ್ ರಾಮಚಂದ್ರ ಉಪಾದ್ಯಾಯ, ವಕ್ವಾಡಿ ಗ್ರಾಮ, ಕುಂದಾಪುರ ಹೋಬಳಿ ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಇವರು 2023-24ನೇ ಸಾಲಿನ ಆತ್ಮ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿ ಘಟಕದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಗುರುತಿಸಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು
ಈ ಸಂಧರ್ಭದಲ್ಲಿ,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಜಿ.ಎಸ್.ಮಮತಾ ದೇವಿ ಶಾಸಕರಾದ ಶ್ರೀ ಯಶ್ ಪಾಲ್ ಎ. ಸುವರ್ಣ.ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.