ಉಡುಪಿ : ಜನವರಿ 26 : ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ನೀರು ಶುದ್ಧಿಕರಣ ಘಟಕದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಜ.29ರಂದು ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ,ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.