ಉಡುಪಿ:ಜನವರಿ 27:ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವನಿಗೆ ಗಂಭೀರ ಗಾಯಗಳಾದ ಘಟನೆ ನಿನ್ನೆ (ಜ. 26 ) ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂದುಬೆಟ್ಟು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ