ಹೆಬ್ರಿ, ಜನವರಿ.28: ಕಾರು ರಿಕ್ಷಾ ಹಾಗೂ ಸರಕಾರಿ ಬಸ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ.
ಮೃತರನ್ನು ಶಾಂತಮ್ಮ(77) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ ಹೋಗುತ್ತಿದ್ದ ಕಾರು, ಎದುರಿನಲ್ಲಿ ಹೋಗುತ್ತಿದ್ದ ಆಟೋ ರೀಕ್ಷಾವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ರಿಕ್ಷಾದ ಬಲಬಾಗಕ್ಕೆ ಢಿಕ್ಕಿ ಹೊಡೆದು, ನಂತರ ಎದುರಿನಿಂದ ಬರುತ್ತಿದ್ದ ಸರಕಾರಿ ಬಸ್ಸಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಂತಮ್ಮ ತೀವ್ರ ಗಾಯಗೊಂಡು ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.