ಉಡುಪಿ -ಜನವರಿ 28: ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ , ಕರಾವಳಿ ಅಲೆ ದಿನಪತ್ರಿಕೆ ಉಡುಪಿ ವರದಿಗಾರ ಶ್ರೀ ಸುರೇಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪ್ರೆಸ್ಸ್ ಕ್ಲಬ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಯ್ಕ ಭಟ್ಕಳ ಅವರ ಸೂಚನೆಯ ಮೇರೆಗೆ ಕರ್ನಾಟಕ ಪ್ರೆಸ್ಸ್ ಕ್ಲಬ್ ನ ರಾಜ್ಯ ಅಧ್ಯಕ್ಷ ರಾದ ಶ್ರೀ ದಯಾನಂದ ಎಂ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ರಮೇಶ್ ಎಸ್ ಜಿ ಅವರು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷ ರನ್ನಾಗಿ ಹಿರಿಯ ಪತ್ರಕರ್ತ ಉಡುಪಿಯ ಶ್ರೀ ಸುರೇಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.