ಬೆಳಗಾವಿ : ಅಪಾರ್ಟ್ಮೆಂಟ್ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಬಸವನಗಲಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಮೃತ ದುರ್ದೈವಿಗಳು.
ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಪಘಾತ ನಡೆದಿದ್ದು, ಮನೆಯಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.