ಉಡುಪಿ:ಫೆಬ್ರವರಿ 01: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಯಾಗಿದ್ದ ಪ್ರಸನ್ನ ಬಿ ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾ.ದಿನೇಶ್ ಕುಮಾರ್ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ನ್ಯಾ.ಪ್ರಸನ್ನ ಬಿ ವರಾಳೆ ಅವರು ಸುಪ್ರೀಂಕೋರ್ಟ್‌ಗೆ ನೇಮಕವಾದ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು. ಇದೀಗ ಅವರನ್ನೇ ಮುಖ್ಯನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.