ನವದೆಹಲಿ:ಫೆಬ್ರವರಿ 03:ಬಿಜೆಪಿ ಪಕ್ಷದ ಹಿರಿಯ ನಾಯಕ ಎಲ್.ಕೆ. ಅಡ್ವಾನಿ (LK Advani) ಅವರಿಗೆ ಭಾರತ ರತ್ನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಅವರು, ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅಡ್ವಾಣಿ ಅವರು ಒಬ್ಬರು ಎಂದು ಹೊಗಳಿದ್ದಾರೆ. ಅಂತಹ ನಾಯಕನಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ ಎಂದು ತಿಳಿಸಿದ್ದಾರೆ.
ಭಾರತದ ಅಭಿವೃದ್ಧಿಗೆ ಅಡ್ವಾಣಿ ಅವರ ಕೊಡುಗೆ ಬಹಳಷ್ಟಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ. ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಅಡ್ವಾಣಿ ಮಾಡಿದ್ದಾರೆ. ಅಂಥವರಿಗೆ ಭಾರತರತ್ನ ಪ್ರಶಸ್ತಿಯನ್ನು ಕೊಡುವುದು ನನ್ನ ಪಾಲಿನ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಬರೆದುಕೊಂಡಿದ್ದಾರೆ