ಉಡುಪಿ :ಫೆಬ್ರವರಿ 05: ಕಾರ್ಯನಿಮಿತ್ತ ಉಡುಪಿಗೆ ಆಗಮಿಸಿದ್ದ ಖ್ಯಾತ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ ಅವರು ಫೆಬ್ರವರಿ 4ರ ಭಾನುವಾರದಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಸನ್ನಿದಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.
ನಂತರ ಭರದಿಂದ ಸಾಗುತ್ತಿರುವ ಕಾಮಗಾರಿ ವೀಕ್ಷಿಸಿದ ನಟ ಪ್ರಕಾಶ್ ರೈ ಅವರು ಇಳಕಲ್ಲಿನ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿಯನ್ನು ಪಡೆದರು, ದಕ್ಷಿಣ ಭಾರತದಲ್ಲೇ ವಿಶಿಷ್ಟವಾಗಿ ಮೂಡಿಬರುತ್ತಿರುವ ದೇಗುಲದ ಕಲಾ ಪ್ರಕಾರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭ ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಶೈಲಪುತ್ರಿ ತಂಡದ ಸಂಚಾಲಕರಾದ ರಾಧಾರಮಣ ಶಾಸ್ತ್ರೀ, ಗುತ್ತಿಗೆದಾರ ಪ್ರಶಾಂತ್ ಶೆಟ್ಟಿ ಕುಂದಾಪುರ ಮತ್ತು ಸ್ವಚ್ಛತಾ ಸಮಿತಿಯ ಮುಖ್ಯ ಸಂಚಾಲಕರಾದ ಅನಿತ್ ಶೆಟ್ಟಿ ಕಾಪು ಉಪಸ್ಥಿತರಿದ್ದರು.