ನವದೆಹಲಿ:ಫೆಬ್ರವರಿ 07:ಅನುದಾನದಲ್ಲಿ ತಾರತಮ್ಯ ಖಂಡಿಸಿ ಇಂದು ದೆಹಲಿಯ ಜಂತರ್ ಮಂತರ್ನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ ನಡೆಯಲಿದೆ. ಈ ನಡುವೆ ಪ್ರತಿಭಟನೆಯಲ್ಲಿ . ಸಿಎಂ, ಡಿಸಿಎಂ, ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.
ಆದರೆ ಇಂದು (ಫೆಬ್ರವರಿ 07) ಬೆಳಗ್ಗೆ 11 ಗಂಟೆಯಿಂದ ಜಂತರ್ ಮಂತರ್ ಪ್ರತಿಭಟನೆಗೆ ದೆಹಲಿ ಪೊಲೀಸರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಡೆಯಿಂದ ರಾಜ್ಯಕ್ಕೆ 1,87,867 ಕೋಟಿ ನಷ್ಟವಾಗಿದೆ. ಕೇಂದ್ರದಿಂದ ನೀಡುವ ಅನುದಾನವನ್ನು ಬಡ ರಾಜ್ಯಗಳಿಗೆ ಹೆಚ್ಚು ಕೊಡಲು ನಮ್ಮ ವಿರೋಧ ಇಲ್ಲ, ಆದರೆ ನಮ್ಮ ರಾಜ್ಯಗಳಿಗೆ ದೊಡ್ಡ ಅನ್ಯಾಯ ಮಾಡಿ ಅವರಿಗೆ ಕೊಡುವುದು ಸರಿಯಲ್ಲ ಆಂತ ಕಿಡಿಕಾರಿದ್ದರು.
14 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು 4.71% ಸಿಕ್ಕಿದರೆ ,15 ನೇ ಹಣಕಾಸು ಆಯೋಗದಲ್ಲಿ 3.64% ರಷ್ಟು ಪಾಲು ಸಿಕ್ಕಿದೆ. ಈ ಮೂಲಕ ತೆರಿಗೆ ಪಾಲು 1.07% ಕಡಿಮೆಯಾಗಿದೆ. ಇದರಿಂದ ಕರ್ನಾಟಕಕ್ಕೆ ಕಳೆದ ಐದು ವರ್ಷದಲ್ಲಿ 62,098 ಕೋಟಿ ಕಡಿಮೆಯಾಗಿದೆ ಎಂದು ಮಾಹಿತಿಯನ್ನು ನೀಡಿದರು. ಈ ನಡುವೆ ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ಕೇಂದ್ರದಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯನ್ನು ವಿರೋಧಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ಕನ್ನಡಿಗರ ಸ್ವಾಭಿಮಾನಿ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಸಂಸದರಿಗೆ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಖುದ್ದಾಗಿ ಪತ್ರ ಬರೆದಿದ್ದಾರೆ.