ಬೆಂಗಳೂರು : ಫೆಬ್ರವರಿ 14: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಈ ಹಿಂದೆ ಹೇಳಲಾಗಿತ್ತು ಆದರೆ ಇದೀಗ 3 ತಿಂಗಳ ಅವಧಿ ವಿಸ್ತರಣೆ ಮಾಡ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.
ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ನಂಬರ್ ಪ್ಲೇಟ್ ಅಳವಡಿಕೆ ಮಾಡ್ತೀವಿ ಎಂದು ಮಧು ಮಾದೇಗೌಡ ಪ್ರಶ್ನೆಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದ್ದಾರೆ.