ಬೆಂಗಳೂರು :ಫೆಬ್ರವರಿ 16: ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಕಾಯುತ್ತಿದ್ದಾರ?ಇಲ್ಲಿದೆ ಶುಭ ಸುದ್ದಿ ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ.
ಈ ಕುರಿತಂತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್.31ರ ಒಳಗಾಗಿ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ. ಏಪ್ರಿಲ್.1ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.