ಉಡುಪಿ: ಫೆಬ್ರವರಿ 16:ಪೊಲೀಸ್ ಹಾಗೂ ನಕ್ಸಲ್ ನಿಗ್ರಹ ಪಡೆ ಕೇರಳದಲ್ಲಿ ವಶಕ್ಕೆ ಪಡೆದಿರುವ ನಕ್ಸಲ್ ಶ್ರೀಮತಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ನಿನ್ನೆ ಫೆಬ್ರವರಿ 15ರಂದು ಕಾರ್ಕಳಕ್ಕೆ ಕರೆ ತಂದರು
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ, ಸದಾಶಿವ ಗೌಡ ಅಪಹರಣ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದಳು.
ಇನ್ನು ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಈಕೆಯನ್ನು ಪೊಲೀಸರು ಬಾಡಿ ವಾರೆಂಟ್ ಮೇಲೆ ಕಾರ್ಕಳಕ್ಕೆ ಕರೆತಂದಿದ್ದಾರೆ.