ಮಂಗಳೂರು: ಸಿನಿಮಾ ಮತ್ತು ನಾಟಕಗಳಲ್ಲಿ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಇಲ್ಲಿನ ದೈವಾರಾಧಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ದೈವಾರಾಧನೆಯನ್ನು ಮಾಡುವುದರಿಂದ ಅಪಮಾನವಗುತ್ತಿದೆ ಅಂಥ ಆರೋಪಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ, ತುಳುನಾಡ ದೈವಾರಾಧನಾ ಸಂರಕ್ಷಣಾ ವೇದಿಕೆ ಮನವಿ ಮಾಡಿದೆ
ಈ ಬಗ್ಗೆ ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್ – ಬಜರಂಗದಳ ನೇತೃತ್ವದಲ್ಲಿ ದೂರು ನೀಡಲಾಗಿದೆ. ಹೀಗೆ ದೈವಾರಾಧನೆ ಪ್ರದರ್ಶನವಾದಲ್ಲಿ ಮುತ್ತಿಗೆ ಹಾಕುತ್ತೇವೆ. ರಿಷಭ್ ಶೆಟ್ಟಿಗೂ ಎಚ್ಚರಿಕೆ ನೀಡುತ್ತಿದ್ದೇವೆ. ಸಿನೆಮಾದಲ್ಲೂ ದೈವರಾಧನೆಯ ಪ್ರದರ್ಶನವಾಗಬಾರದು. ಪ್ರದರ್ಶನವಾದ್ರೆ ನಮ್ಮ ಹೋರಾಟ ತೀವ್ರವಾಗುತ್ತದೆ. ಒಂದುವೇಳೆ ಪ್ರದರ್ಶನವಾದಲ್ಲಿ ಬೆಂಗಳೂರಿನಲ್ಲಿ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.