ಮಂಗಳೂರು ಫೆಬ್ರವರಿ 17: ಎಐಸಿಸಿ ಸೂಚನೆಯ ಮೇರೆಗೆ ಎಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ.ಸಮಾವೇಶದ ಹಿನ್ನೆಲೆಯಲ್ಲಿ ಸಿಎಂ ಭಾಗವಹಿಸುವ ಕಂಬಳ ಕಾರ್ಯಕ್ರಮದಲ್ಲೂ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.
ವಾಮಂಜೂರಿನ ತಿರುಮೈಲ್ ನಲ್ಲಿ ಕಂಬಳದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.ಸಿಎಂ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.
ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ತಾತ್ಕಾಲಿಕವಾಗಿ ರೆಡ್ ಜೋನ್ ಎಂದು ಡೋನ್ ಹಾರಾಟಕ್ಕೆ ನಿರ್ಬಂಧಿಸಲಾಗಿದೆ.
ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ರಾಜಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಹಿನ್ನೆಲೆಯಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ.
ಎಐಸಿಸಿ ಸೂಚನೆ ಮೇರೆಗೆ ರಾಜಮಟ್ಟದ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಲಿ ಎಐಸಿಐ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲ ಭಾಗವಹಿಸಲಿದ್ದಾರೆ.