ಕಾರ್ಕಳ;ಫೆಬ್ರವರಿ 18:ಕಳೆದ ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಬಿಜೆಪಿ ಕ್ಷೇತ್ರಾಧ್ಯಕ್ಷರು ಸೇರಿದಂತೆ ಜಿಲ್ಲಾ ಮಟ್ಟದ ಪಕ್ಷದ ವಿವಿಧ ಹುದ್ದೆಗಳಿಗೆ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇಮಕಾತಿ ಮಾಡಿದ್ದಾರೆ.
ಕಾರ್ಕಳ ಬಿಜೆಪಿ ನೂತನ ಕ್ಷೇತ್ರಾಧ್ಯಕ್ಷರಾಗಿ ಈ ಹಿಂದೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ನವೀನ್ ನಾಯಕ್ ನಿಟ್ಟೆ ಆಯ್ಕೆಯಾಗಿದ್ದಾರೆ. ನಿಟ್ಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಹಾಗೂ ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸಾಕಷ್ಟು ಅನುಭವ ಹೊಂದಿರುವ ಹಿನ್ನಲೆಯಲ್ಲಿ ನವೀನ್ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಕಳೆದ 20 ವರ್ಷಗಳಿಂದ ತಳಮಟ್ಟದ ಕಾರ್ಯಕರ್ತರಾಗಿ, ನಿಟ್ಟೆ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ, ಬಿಜೆಪಿ ಜಿಲ್ಲಾ ಯುಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ನವೀನ್ ನಾಯಕ್ ಶಾಲಾ ಬಾಲಕನಾಗಿದ್ದಲೇ ಆರೆಸ್ಸೆಸ್ ಕಾರ್ಯಚಟುವಟಿಕೆಗಳಲ್ಲಿ ನಿರಂತವಾಗಿ ತೊಡಗಿಸಿಕೊಂಡು ಗ್ರಾಮ ಪಂಚಾಯತಿ,ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗ ಗೆಲುವಿಗೂ ಶ್ರಮಿಸಿದ್ದರು. ನಿಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸುಮಾರು 1.20 ಕೋ,ರೂ ವೆಚ್ಚದಲ್ಲಿ ಮಾದರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಿದ್ದರು.ಕೇವಲ ರಾಜಕೀಯ ಕ್ಷೇತ್ರ ಮಾತ್ರವಲ್ಲದೇ ಸಾಮಾಜಿಕ,ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೂ ಸಾಕಷ್ಟು ಕೊಡುಗೆಗನ್ನು ನೀಡಿ ಗಮನ ಸೆಳೆದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ಮಂಡಲದ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಬೀಜಾಡಿ, ಉಡುಪಿ ಗ್ರಾಮಾಂತರ ಮಂಡಲಕ್ಕೆ ರಾಜೀವ ಕುಲಾಲ್, ಉಡುಪಿ ನಗರಕ್ಕೆ ದಿನೇಶ್ ಅಮೀನ್, ಕಾಪು ಮಂಡಲಕ್ಕೆ ಜಿತೇಂದ್ರ ಶೆಟ್ಟಿಯವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ