ಉಡುಪಿ :ಫೆಬ್ರವರಿ 25:ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ್ದ BLOGGERS MEET 2.0 ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಮಲ್ಪೆ ಬೀಚ್‌ನಲ್ಲಿ ಶನಿವಾರ ನಡೆದ ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು .
ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಜಿಲ್ಲೆಯ ಸಂಪ್ರದಾಯಗಳು, ಪಾದಪದ್ಧತಿಗಳು, ಚಟುವಟಿಕೆ ಗಳು, ನೈಸರ್ಗಿಕ ಸೌಂದರ್ಯಗಳನ್ನು ಪ್ರಚುರ ಪಡಿಸಿ ಪರಿಚಯಿಸಲು ಸಾಮಾಜಿಕ ಜಾಲತಾಣಗಳ ಪ್ರಭಾವಿ ಬ್ಲಾಗರ್‌ಗಳ ಸಹಯೋಗದೊಂದಿಗೆ ‘ಬ್ಲಾಗರ್ಸ್ ಮೀಟ್ 2.0’ನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ. ಡಾ ಕೆ ವಿದ್ಯಾಕುಮಾರಿ ತಿಳಿಸಿದರು
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ. ಯು. ಕುಮಾರ್, ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ ಹೆಬ್ಬಾರ್, ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಭಾಗೀದಾರರು, ರಾಷ್ಟ್ರ- ಅಂತಾರಾಷ್ಟ್ರ ಮಟ್ಟದ ಬ್ಲಾಗರ್‌ಗಳು, ಪ್ರವಾಸೋದ್ಯಮ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ್ದ BLOGGERS MEET 2.0 ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ. ಯು. ಕುಮಾರ್, ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ ಹೆಬ್ಬಾರ್, ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಭಾಗೀದಾರರು, ರಾಷ್ಟ್ರ- ಅಂತಾರಾಷ್ಟ್ರ ಮಟ್ಟದ ಬ್ಲಾಗರ್‌ಗಳು, ಪ್ರವಾಸೋದ್ಯಮ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.