ಬೆಂಗಳೂರು : ಫೆಬ್ರವರಿ 25 :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಿದೆ.
ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.