ಚಿತ್ರದುರ್ಗ: ಫೆಬ್ರವರಿ 28:ಫೋಕ್ಸೋ ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಮುರುಘಾಶ್ರೀ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಅಲ್ಲದೆ, ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.
ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ, ಮುರುಘಾ ಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿದೆ.
ಎಸ್ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀಗಳು ಮುರುಘಾಮಠ, ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು.
ಫೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮುರುಘಾ ಶ್ರೀ ಕೈಗೆ ಮಠದ ಆಡಳಿತ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.