ನವದೆಹಲಿ : ಫೆಬ್ರವರಿ 28:ಭ್ರಷ್ಟಾಚಾರ ವಿರೋಧಿ ಒಂಬುಡ್ಸ್ಮನ್ ಲೋಕಪಾಲ್ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.
ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರನ್ನು ಲೋಕಪಾಲ್ ಅಧ್ಯಕ್ಷರಾಗಿ ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಜುಲೈ 2022 ರಲ್ಲಿ ಸುಪ್ರೀಂ ಕೋರ್ಟ್ನಿಂದ ನಿವೃತ್ತರಾದರು.
ನಿವೃತ್ತ ನ್ಯಾಯಮೂರ್ತಿಗಳಾದ ಲಿಂಗಪ್ಪ ನಾರಾಯಣ ಸ್ವಾಮಿ, ಸಂಜಯ್ ಯಾದವ್ ಮತ್ತು ರಿತು ರಾಜ್ ಅವಸ್ಥಿ ಅವರನ್ನು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್ಮನ್ನ ನ್ಯಾಯಾಂಗ ಸದಸ್ಯರನ್ನಾಗಿ ನೇಮಿಸಲಾಗಿದೆ.