ಉಡುಪಿ :ಫೆಬ್ರವರಿ 28: ಉತ್ತಮ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರಕಾರ ಸಬ್ಸಿಡಿ ದರದಲ್ಲಿ ಪ್ರತಿ ಕೆಜಿಗೆ ರೂ. 29 ರಂತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಇಂದು ಫೆಬ್ರವರಿ 28 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ಆದಿಉಡುಪಿ ಸಂತೆ ಮಾರ್ಕೆಟ್ ಬಳಿ ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಿದ್ದಾರೆ.
ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.