ಬೆಂಗಳೂರು:ಫೆಬ್ರವರಿ 29 :ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟ, ಸಿನಿಮಾ ನಿರ್ದೇಶಕ, ಸಂಗೀತ ಸಂಯೋಜಕ, ಗಾಯಕರಾಗಿಯೂ ಗುರುತಿಸಿಕೊಂಡಿರುವ ಸಾಧು ಕೋಕಿಲ ಅವರು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಬಡ್ತಿ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಸಾಧು ಕೋಕಿಲ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ
ಬಹಳಷ್ಟು ಸಮಯದಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ನೇಮಕ ಸ್ಥಾನಕ್ಕೆ ತೆರೆ ಬಿದ್ದಿದೆ. ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸಾಧುಕೋಕಿಲ ಅವರು ಆಯ್ಕೆ ಆಗಿದ್ದಾರೆ. ನಿಗಮ ಮಂಡಳಿಗೆ 44 ಜನರ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಆಯ್ಕೆ ಪ್ರಕ್ರಿಯೆ ಮಾಡಿದ್ದಾರೆ.
ಸಿನಿಮಾ, ರಿಯಾಲಿಟಿ ಶೋಗಳ ಜತೆಗೆ ರಾಜಕೀಯದಲ್ಲೂ ಸಾಧುಕೋಕಿಲ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಜತೆಗೆ ಸಾಧು ಕೋಕಿಲ ಒಳ್ಳೆಯ ನಂಟು ಹೊಂದಿದ್ದಾರೆ. ಈ ಹಿಂದೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿಯೂ ಸಾಧುಕೋಕಿಲ ನೇಮಕವಾಗಿದ್ದರು. ಈ ನಡುವೆ ಅಕಾಡೆಮಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಹೀಗಿರುವಾಗಲೇ ಇದೀಗ ನಿಗಮ ಮಂಡಳಿಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸಾಧು ಕೋಕಿಲ ಅವರಿಗೂ ಸ್ಥಾನ ಸಿಕ್ಕಿದೆ.
ಸಾಕಷ್ಟು ದಿನಗಳಿಂದ ಚಲನಚಿತ್ರ ಅಕಾಡೆಮಿಗೆ ಯಾರು ಅಧ್ಯಕ್ಷರಾಗಲಿದ್ದಾರೆ ಎಂಬ ಕುತೂಹಲವಿತ್ತು. ಸಾಧು ಕೋಕಿಲ ಹೆಸರು ಕೂಡ ಕೇಳಿ ಬಂದಿತ್ತು. ಸಿದ್ದರಾಮಯ್ಯ ಅವರಿಗೆ ಸಾಧು ಕೋಕಿಲ ಆಪ್ತರು, ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದ ಜೊತೆ ಕೂಡ ಅವರು ಗುರುತಿಸಿಕೊಂಡಿದ್ದರು. ಕಳೆದ ವರ್ಷ ಮಾರ್ಚ್‌ನಲ್ಲಿ ಅವರು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕ ಆಗಿದ್ದರು.