ಉಡುಪಿ ಮಾರ್ಚ್ 01: ಮಲ್ಪೆ ಮೀನುಗಾರರನ್ನು ಭಟ್ಕಳದಲ್ಲಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಫೆ. 26ರಂದು ಮಲ್ಪೆಯ ಚೇತನ್ ಸಾಲ್ಯಾನ್ ಅವರಿಗೆ ಸೇರಿದ ಕೃಷ್ಣ ನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿತ್ತು .ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿರುವಾಗ ಆಳಸಮುದ್ರ ಬೋಟಿಗೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಈ ವೇಳೆ ಭಟ್ಕಳದ ಮೀನುಗಾರರ ತಂಡ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ಸಹಿತ 7 ಮಂದಿ ಮೀನುಗಾರರನ್ನು25 ಜನರ ತಂಡ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ಅಪಹರಿಸಿತ್ತು. ಅಪಹರಣಕಾರರು ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಕಸಿದು ಮಾರಾಟ ಮಾಡಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಇದೀಗ ಭಟ್ಕಳದ ಸುಬ್ರಹ್ಮಣ್ಯ ಖಾರ್ವಿ (34), ರಾಘವೇಂದ್ರ ಖಾರ್ವಿ (38), ಹರೀಶ್ ನಾರಾಯಣ ಖಾರ್ವಿ (40), ನಾಗೇಶ್ ನಾರಾಯಣ (42), ಗೋಪಾಲ್ ಮಾಧವ್(38), ಸಂತೋಷ್ ದೇವಯ್ಯ (43), ಲಕ್ಷಣ್ (50) ಬಂಧಿಸಲಾಗಿದೆ.