ಉಡುಪಿ :ಮಾರ್ಚ್ 03 : ಇಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸೂಚನೆ ನೀಡಲಾಗಿದೆ.ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು.
ಶಾಲೆಗಳಲ್ಲಿ ಲಸಿಕಾ ಬೂತ್‍ಗಳನ್ನು ತೆರೆಯಲಾಗುತ್ತದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ.
ಮಾ.3 ರಂದು ಭಾನುವಾರ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‍ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು ಉಚಿತವಾಗಿ ನಿಡಲಾಗುವುದು. ಸಾರ್ವಜನಿಕರು ಈ ಲಸಿಕಾ ಬೂತ್‍ಗಳಿಗೆ ತಮ್ಮ 0 ಯಿಂದ 5 ವರ್ಷದ ಮಕ್ಕಳನ್ನು ಕರೆತಂದು ಪೋಲಿಯೋ ಲಸಿಕೆ ಹಾಕಿಸುವಂತೆ ಕೋರಲಾಗಿದೆ.