ಮಂಗಳೂರು :ಮಾರ್ಚ್ 04: ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ. ಹಾಗೂ ಆರೋಪಿ ಅಬಿನ್ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.