ಉಪ್ಪಿನಂಗಡಿ:ಮಾರ್ಚ್ 05: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಶ್ರೀಜಿಸ್(20ವ.) ಮೃತಪಟ್ಟವರು.ಶ್ರೀಜಿಸ್‌ರವರು ರಾಮಕುಂಜ ಸಮೀಪವಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.