ಉಡುಪಿ : ಮಾರ್ಚ್ 07: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆ ಮಲ್ಪೆಯ ಗರಡಿಮಜಲು ನಿವಾಸಿ ದಿವಾಕರ್ ಸೆಲ್ಫಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಜೊತೆಗೆ ಮಹಿಳೆಯರಿಗೆ ಪ್ರಯಾಣಕ್ಕೆ ಉಚಿತ ಬಸ್ ಟಿಕೆಟ್, 2000 ರೂ., ವಿದ್ಯುತ್ ಬಿಲ್ ಫ್ರೀ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಉಚಿತವಾಗಿ ರಾಜ್ಯ ಸರ್ಕಾರ ಕೊಡುತ್ತಿದೆ. ಇದಕ್ಕೆ ಹಣ ಕೊಡಬೇಕಿಲ್ಲ, ಎಲ್ಲಾ ಫ್ರೀ ಎಂದು ಲೇವಡಿ ಮಾಡಿ ವಿಡಿಯೋ ಹರಿಬಿಟ್ಟಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ. ದಿವಾಕರ್ ಕೋಟ್ಯಾನ್ ರಾಜ್ಯ ಸರಕಾರದ ಯೋಜನೆಗಳ ಜೊತೆ ಬಾಂಬ್ ಉಚಿತ ಹೇಳು ವುದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಹೇಳನಕಾರಿ ಯಾಗಿ ನಿಂದಿಸಿದ್ದಾನೆ.ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.