ನವದೆಹಲಿ:ಮಾರ್ಚ್ 08:ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಗೊರೆಯನ್ನು ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರಧಾನಿ ಮೋದಿಯವರು ಈ ಘೋಷಣೆಯನ್ನು ಮಾಡಿದ್ದಾರೆ. ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.
ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜೊತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ.
ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ