ಉಡುಪಿ : ಮಾರ್ಚ್ 08:ಶ್ರೀ ಉಮಾಮಹೇಶ್ವರ ದೇವಸ್ಥಾನ ಚಕ್ರತೀರ್ಥ ಸಗ್ರಿ. ಇದರ ವತಿಯಿಂದ ಶಿವರಾತ್ರಿ ಮಹೋತ್ಸವ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡುವ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶ್ರೀ ದೇಗುಲದ ಅಭಿವೃದ್ದಿ ಕಾರ್ಯಗಳಿಗೆ ಶಾಸಕನ ನೆಲೆಯಲ್ಲಿ ಸಂಪೂರ್ಣ ಸಹಕಾರದ ಭರವಸೆ ನೀಡಿದರು.
ಸಮಾರಂಭವನ್ನು ಕಾಣಿಯೂರು ಮಠದ ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚಿಸಿದರು.
ಸಮಾರಂಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಸುಪ್ರಸಾದ್ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ರುದ್ರಯ್ಯ ಕೆ. ಆಚಾರ್ಯ, ಗಣ್ಯರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಶ್ರೀ ನಾರಾಯಣ ಆಚಾರ್ಯ, ಶ್ರೀ ಸತೀಶ್ ಅಮೀನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. .