ಉಡುಪಿ :ಮಾರ್ಚ್ 09:ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.
ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಸವಾರ ಸ್ವಸ್ತಿಕ್ ಬೈಕ್ ಸಮೇತ ಬಿದ್ದು ಗಂಭೀರವಾಗಿ ಗಾಯಗೊಂಡರು. ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ನಿನ್ನೆ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.