ಬೆಂಗಳೂರು :ಮಾರ್ಚ್ 09:ಕರ್ನಾಟಕದ ಆರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ. ಅದರಲ್ಲಿ ಶಿವಮೊಗ್ಗದ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ಗೀತಾ ಶಿವರಾಜ್‌ಕುಮಾರ್ ಯಶಸ್ವಿಯಾಗಿದ್ದಾರೆ . 2014ರಲ್ಲಿ ಶಿವಮೊಗ್ಗದಲ್ಲೇ ನಿಂತಿದ್ದ ಗೀತಾ ಶಿವರಾಜ್‌ಕುಮಾರ್ ಸೋಲನುಭವಿಸಿದ್ದರು. ಇದೀಗ ಆ ಸೋಲಿಗೆ ಸೇಡು ತಿರಿಸಿಕೊಳ್ಳಲು ಕಾಂಗ್ರೆಸ್‌ನಿಂದ ಕಣಕ್ಕಿಳಿಯುತ್ತಿದ್ದಾರೆ.
36 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!
2024ರ ಲೋಕಸಭಾ ಚುನಾವಣೆಗೆ (Lok Sabha election 2024) ಕಾಂಗ್ರೆಸ್ (Congress) ರಣಕಹಳೆ ಮೊಳಗಿಸಿದೆ. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ನೇತೃತ್ವದಲ್ಲಿ ಕಾಂಗ್ರೆಸ್ ಮಹತ್ವದ ಸಭೆ ನಡೆಸಿತ್ತು. ಅದರಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದೆ. 36 ಅಭ್ಯರ್ಥಿಗಳ ಮೊದಲ ಪಟ್ಟಿ ಇದೀಗ ರಿಲೀಸ್ ಆಗಿದೆ. ಇದರಲ್ಲಿ ಕರ್ನಾಟಕದ 6 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
6 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ರಾಜ್ಯದ 6 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.