ಉಡುಪಿ: ಫೆಸ್ಬುಕ್ ನಲ್ಲಿ ಪರಿಚಯವಾದ ಮಿಹಿಯಾಲ್ ನಿಲ್ಜೆನ್ ಎಂಬ ಅಪರಿಚಿತ ವ್ಯಕ್ತಿ ಜರ್ಮನಿ ಮಿಲಿಟರಿ ಅಧಿಕಾರಿಯೆಂದು ಹೇಳಿ ಬರೊಬ್ಬರಿ 54,74,000 ವಂಚನೆ ಮಾಡಿರುವ ಘಟನೆ ವರದಿಯಾಗಿದೆ.
ಸಂತ್ರಸ್ಥೆ ಪೇತ್ರಿಯ ಸ್ಟೆಫನಿ ಕ್ರಾಸ್ಟೊ (42 ) ವಾಟ್ಸ್ಅಪ್ ಮುಖೇನ ಚಾಟಿಂಗ್ ನಡೆಸಿದ್ದಾರೆ. ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ದಿನಾಂಕ 15/02/2024 ರಂದು ದೆಹಲಿಯ ಪಾರ್ಸೆಲ್ ಆಫೀಸ್‌ನಿಂದ ಎಂಬುದಾಗಿ ಅಪರಿಚಿತ ವ್ಯಕ್ತಿ ಮೊಬೈಲ್ ನಂಬ್ರದಿಂದ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯುವರೆ ಹಣ ಪಾವತಿಸಬೇಕು ಎಂದು ತಿಳಿಸಲಾಗಿದೆ.
ಅದರಂತೆ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ, ಗೂಗಲ್ ಪೇ ಗಳಿಗೆ ಹಂತ ಹಂತವಾಗಿ ಒಟ್ಟು ರೂಪಾಯಿ 54,74,000/- ಹಣವನ್ನು ಪಾವತಿಸಿದ್ದಾರೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 20/2024 ಕಲಂ: 66(ಸಿ), 66(ಡಿ) ಐ.ಟಿ. ಆಕ್ಟ್ ಮತ್ತು ಕಲಂ: 420 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.