ಉಡುಪಿ : ಮಾರ್ಚ್ 12:ಇಂದು ಮಾರ್ಚ್ 12 ಮಂಗಳವಾರ ಸಂಜೆ 4ಗಂಟೆಗೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಿದ್ಯುಕ್ತವಾಗಿ ಸೇರ್ಪಡೆಯಾಗಲಿದ್ದಾರೆ
ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗ ಸೇವೆ ಸಲ್ಲಿಸಿದ್ದರು
ಕಾಂಗ್ರೆಸ್ ಪಕ್ಷ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು.
2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು.ಬಳಿಕ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಸೇರಿಕೊಂಡಿದ್ದರು.