ಮುಂಬೈ:ಮಾರ್ಚ್ 15:ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, 81 ವರ್ಷದ ಈ ನಟನಿಗೆ ಇಂದು ಉಸಿರಾಟದಲ್ಲಿ ಸಮಸ್ಯೆ ಉಂಟಾಗಿತ್ತು. ಕೂಡಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು, ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರ ಕುಟುಂಬದ ವೈದ್ಯರು ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅಮಿತಾಭ್ ಬಚ್ಚನ್ ಅವರಿಗೆ ವಯೋಸಹಜವಾಗಿ ಇತ್ತೀಚಿನ ಕೆಲ ಸಮಯದಿಂದ ಪದೇ ಪದೇ ಅನಾರೋಗ್ಯ ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ