ದಕ್ಷಿಣ ಕನ್ನಡ:ಮಾರ್ಚ್ 16: ಇಲ್ಲಿನ ಉಜಿರೆಯಲ್ಲಿರುವ ರುಡ್ ಸೆಟ್ ಸಂಸ್ಥೆಯಿಂದ ( RUDSET Institution ) ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ( Mobile Repair Training ) ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಂಸ್ಥೆಯು, ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗಾಗಿ ( Free Training ) ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.
ದಿನಾಂಕ 23-03-2023ರಿಂದ ದಿನಾಂಕ 21-04-2023ರವರೆಗೆ 30 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಇನ್ನುಳಿದ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದಿದೆ.
ಈ ತರಬೇತಿಗೆ 18 ರಿಂದ 45 ವರ್ಷ ವಯೋಮಾನದವರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ, ಉದ್ಯೋಗ ಕೈಗೊಳ್ಳಲು ಟೂಲ್ ಕಿಟ್ ಗಳನ್ನು ಉಚಿತವಾಗಿ ಕೊಡಲಾಗುತ್ತದೆ. ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಕೂಡ ನೀಡಲಾವುದು ಎಂದಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು. ಬಿಪಿಎಲ್ ರೇಷನ್ ಕಾರ್ಡ್ ಅಥವಾ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಚೀಟಿ ಹೊಂದಿರಬೇಕು. ಇಂತಹವರು ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ 9980885900, 9902594791, 9448484237 ಸಂಖ್ಯೆಗೆ ಸಂಪರ್ಕಿಸಬಹುದು. ಇಲ್ಲವೇ www.rudsetujire.com ಜಾಲತಾಣಕ್ಕೂ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.