ಬೆಂಗಳೂರು:ಮಾರ್ಚ್ 17: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಇಂದು ಸ್ಪೂರ್ತಿ ದಿನವನ್ನಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಿಡಿಪಿ ಕೂಡ ಬಿಡುಗಡೆ ಮಾಡಲಾಗಿದೆ
ಟೀಕೆಗಳು ಸಾಯುತ್ತವೆ.ಕೆಲಸಗಳು ಉಳಿಯುತ್ತವೆ ಎಂಬ ಘೋಷ ವಾಕ್ಯದೊಂದಿಗೆ ಸಿಡಿಪಿ ರಿಲೀಸ್ ಮಾಡಲಾಗಿದೆ.
ಪವರ್ ಸ್ಟಾರ್ ಪುನೀತ್ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆ.